RNI NO. KARKAN/2006/27779|Saturday, July 12, 2025
You are here: Home » breaking news » ಗೋಕಾಕ:ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

ಗೋಕಾಕ:ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ 

ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

ಬೆಟಗೇರಿ ಸೆ 26 : ಬೆಳಗಾವಿ ಹಾಲು ಒಕ್ಕೂಟ ಕೂಡ ಮಾಡುವ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಾಧನೆಗೈದ ಜಿಲ್ಲಾ ಮಟ್ಟದ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಯನ್ನು ಸತತ ಎರಡನೇಯ ಬಾರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತನ್ನ ಮುಡಿಗೆರಿಸಿಕೊಂಡಿದೆ.
ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಮ್‍ಎಫ್ ಅಧ್ಯಕ್ಷ ವಿವೇಕರಾವ್ ಪಾಟೀಲ ಹಾಗೂ ಆಡಳಿತ ಮಂಡಳಿ ಸದಸ್ಯರು ಶನಿವಾರ ಸೆ.22 ರಂದು ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸರ್ವ ಸಾಧಾರಣ ಮಹಾಸಭೆಯಲ್ಲಿ ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಾಣೇಶ ಪಾಟೀಲ, ಮುಖ್ಯ ಕಾರ್ಯನಿವಾಹಕ ನಿಂಗಪ್ಪ ನೀಲಣ್ಣವರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಬೆಳಗಾವಿ ಹಾಲು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿವಾಹಕರು, ಅಧ್ಯಕ್ಷರು, ಸದಸ್ಯರು, ಗಣ್ಯರು, ಇತರರು ಇದ್ದರು.
“ ಸ್ಥಳೀಯ ಹೈನುಗಾರಿಕೆ ರೈತರ ಸಹಕಾರ, ಪ್ರೋತ್ಸಾಹದಿಂದ ಹಾಗೂ ಉತ್ತಮ ಗುಣಮಟ್ಟದ ಹಾಲು ಈ ಸಂಘಕ್ಕೆ ನೀಡುತ್ತಿರುವದರ ಪ್ರತಿಫಲದಿಂದ ಬೆಳಗಾವಿ ಜಿಲ್ಲಾ ಮಟ್ಟದ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಯನ್ನು ಸತತ ಎರಡನೇಯ ಬಾರಿ ಪಡೆದುಕೊಂಡಿದೆ. ಮುಂಬರುವ ದಿನಗಳಲ್ಲಿ ಗ್ರಾಮದಲ್ಲಿ ಇನ್ನೂ ಹಲವಾರು ಯೋಜನೆಗಳ ಮೂಲಕ ಹೈನುಗಾರಿಕೆ ಅಭಿವೃದ್ಧಿಗಾಗಿ ಪ್ರಯತ್ನಿಸಲಾಗುವದು.

* ಪ್ರಾಣೇಶ ಪಾಟೀಲ. ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ

Related posts: