ಖಾನಾಪುರ:ಬಾಲಕಿಯರ ವಾಲಿಬಾಲ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ:
ಬಾಲಕಿಯರ ವಾಲಿಬಾಲ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ:
ಖಾನಾಪುರ ಅ 1 : ತಾಲೂಕಿನ ಮಂಗೇನಕೊಪ್ಪ ಸರಕಾರಿ ಪ್ರೌಢ ಶಾಲೆಯ ಬಾಲಕಿಯರ ವಾಲಿಬಾಲ ತಂಡ ಜಿಲ್ಲಾ ಮಟ್ಟದಲ್ಲಿ ಪ್ರತಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ತಿಂಗಳು 25ರಂದು ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿಯಲ್ಲಿ ಜರುಗಿದ ಪ್ರೌಢ ಶಾಲಾ ಮಟ್ಟದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಮಂಗೆನಕೊಪ್ಪ ಪ್ರೌಢ ಶಾಲೆಯ ಬಾಲಕಿಯರ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸದರಿ ವಿದ್ಯಾರ್ಥಿನಿಯರಿಗೆ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು, ಶಿಕ್ಷಕ ವೃಂಧ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.