RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಗುರು-ಹಿರಿಯರನ್ನು ಗೌರವಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಡಾ|| ಎಸ್.ಓ.ಹಲಸಗಿ

ಗೋಕಾಕ:ಗುರು-ಹಿರಿಯರನ್ನು ಗೌರವಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಡಾ|| ಎಸ್.ಓ.ಹಲಸಗಿ 

ಗುರು-ಹಿರಿಯರನ್ನು ಗೌರವಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಡಾ|| ಎಸ್.ಓ.ಹಲಸಗಿ

ಗೋಕಾಕ ಅ 4 : ವಿದ್ಯಾರ್ಥಿಯ ಜೀವನದಲ್ಲಿ ಗುರಿಯನಿಟ್ಟು ಶಿಕ್ಷಣವನ್ನು ಪಡೆದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಕೊಳ್ಳಬೇಕೆಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶವಿದ್ಯಾಲಯದ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಹಾಗೂ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ|| ಎಸ್.ಓ.ಹಲಸಗಿ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಜರುಗಿದ 2018-19 ಸಾಲಿನ ಸಾಂಸ್ಕಂತಿಕ,ಕ್ರೀಡಾ, ಎನ್‍ಎಸ್‍ಎಸ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯತೇರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವುದರಿಂದ ತಮ್ಮ ಆರೋಗ್ಯದ ಜೊತೆಗೆ ಸದಾ ಕ್ರೀಯಾಶೀಲರಾಗಿರುತ್ತಾರೆ. ನಮ್ಮ ದೇಶದ ಇತಿಹಾಸ, ಪರಂಪರೆ, ಆಧ್ಯಾತ್ಮಿಕ ವಿಚಾರಧಾರೆಗಳನ್ನು ಮನನ ಮಾಡಿಕೊಂಡು ಗುರು-ಹಿರಿಯರನ್ನು ಗೌರವಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ತಮ್ಮಲ್ಲಿ ಅಡಕವಾಗಿರುವ ಕಲೆಯಲ್ಲಿ ಪ್ರಾವಿತ್ಯತೆ ಪಡೆದು ಕಲೆಯನ್ನು ಬೆಳಕಿಗೆ ತರುವ ಕಾರ್ಯದಲ್ಲಿ ಶ್ರಮಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಎ.ಪಿ.ಮುಲ್ಲಾ ಅವರು ಮಾತನಾಡಿ, ಪ್ರತಿವರ್ಷ ವಿನೂತನವಾದ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿರುವ ಸುಪ್ತಪ್ರತಿಭೆಯನ್ನು ಹೊರ ತರಲು ಮಹಾವಿದ್ಯಾಲಯವು ಶ್ರಮಿಸುತ್ತಿದೆ. ಭೋದಕ-ಭೋದಕೇತರ ಸಿಬ್ಬಂದಿಗಳ ಸಹಕಾರದಿಂದ ಮಹಾವಿದ್ಯಾಲಯದಲ್ಲಿ ಒಳ್ಳೆಯ ಕಲಿಕಾ ವಾತವಾರಣವಿದೆ. ಸಚಿವರಾದ ರಮೇಶ ಜಾರಕಿಹೊಳಿ ಹಾಗೂ ಇಲ್ಲಿಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಮಹಾವಿದ್ಯಾಲಯದ ಪ್ರಗತಿಗಾಗಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಾಂಸ್ಕøತಿಕ ಸಂಘದ ಕಾರ್ಯದರ್ಶಿ ಪ್ರೊ.ವಿ.ಐ.ತಿಳಗಂಜಿ, ದೈಹಿಕ ಶಿಕ್ಷಣ ನಿರ್ದೇಶಕ ಎ.ಎ.ನದಾಫ, ಎನ್‍ಎಸ್‍ಎಸ್ ಅಧಿಕಾರಿ ಪ್ರೊ. ಮಹಮ್ಮದ ಶಾಹಿದ್, ಎನ್‍ಎಸ್‍ಎಸ್ ಮಹಿಳಾ ಘಟಕದ ಅಧಿಕಾರಿ ಪ್ರೊ. ಎಸ್.ಸಿ.ಶಿಗ್ಲಿ, ವಿದ್ಯಾರ್ಥಿ ಕಾರ್ಯದರ್ಶಿ ಪ್ರವೀಣ ಲಟಕನ ಸೇರಿದಂತೆ ಅನೇಕರು ಇದ್ದರು.

Related posts: