RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಸಮಯಕ್ಕೆ ಸರಿಯಾಗಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರು

ಗೋಕಾಕ:ಸಮಯಕ್ಕೆ ಸರಿಯಾಗಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರು 

ಸಮಯಕ್ಕೆ ಸರಿಯಾಗಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರು

ಗೋಕಾಕ ಜ 14 : ನಗರದಲ್ಲಿ ಸೋಮವಾರ ಪೇಠೆ ಸೇರಿದಂತೆ ಇನ್ನಿತರ ಗಲ್ಲಿಗಳಲ್ಲಿ ಸರಿಯಾದ ಸಮಯಕ್ಕೆ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಸೋಮವಾರದಂದು ಕೆಲವು ಸಾರ್ವಜನಿಕರು 24/7 ಕುಡಿಯುವ ನೀರಿನ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ಕೇಳಿದರು ಅಧಿಕಾರಿಗಳು ಯಾವುದೇ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ನಗರದಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದ್ದು ಸಾರ್ವಜನಿಕರು ವಾಂತಿ ಭೇದಿ, ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದು, ಈಗಾಗಲೇ ಹಲವು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಮಲ್ಲಿಕಾರ್ಜುನ ಹೊಸಪೇಟ ದೂರಿದ್ದಾರೆ.
ಹೀಗಾಗಿ ಅಧಿಕಾರಿಗಳು ಇತ್ತ ಗಮನಹರಿಸಿ ಸರಿಯಾಗಿ ಶುದ್ಧ ಕುಡಿಯುವ ನೀರು ಪೂರೈಸಬೇಕು ಇಲ್ಲವಾದಲ್ಲಿ ಸೋಮವಾರ ಪೇಠೆಯ ಸಾರ್ವಜನಿಕರು 24/7 ಕುಡಿಯುವ ನೀರಿನ ಕಚೇರಿಯ ಮುಂದೆ ಅನಿರ್ಧಿಷ್ಠಾವಧಿ ಹೋರಾಟ ಮಾಡಲಾಗುವದು ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

Related posts: