RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ದಿ. 25 ರಂದು ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನ

ಗೋಕಾಕ:ದಿ. 25 ರಂದು ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನ 

ದಿ. 25 ರಂದು ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನ

ಗೋಕಾಕ ಜ 24 : ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಾಳೆ ದಿ. 25 ರಂದು ಇಲ್ಲಿನ ಉದ್ದವ್ವದೇವಿ ದೇವಸ್ಥಾನದಲ್ಲಿ ನಡೆಯಲಿವೆ.
ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನದ ಕಾರ್ಯಕ್ರಮದ ಅಂಗವಾಗಿ ನಾಳೆ ಸಂಜೆ 5 ಗಂಟೆಗೆ ಉದ್ದವ್ವದೇವಿ ದೇವಸ್ಥಾನದಿಂದ ಗ್ರಾಮ ಪಂಚಾಯತಿ ಕಾರ್ಯಾಲಯದವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ. ನಂತರ ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.
ಈ ಕಾರ್ಯಕ್ರಮದ ಸಾನಿಧ್ಯವನ್ನು ಕವಲಗುಡ್ಡದ ಅಮರೇಶ್ವರ ಮಹಾರಾಜರು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ವಹಿಸುವರು ಎಂದು ಸ್ಥಳೀಯ ಕುರುಬರ ಸಂಘದ ಪ್ರಕಟಣೆ ತಿಳಿಸಿದೆ.

Related posts: