ಗೋಕಾಕ:ಬಸ್ ನಿಲ್ದಾಣ ಕಾಮಗಾರಿಗೆ ಗುದ್ದಲಿ ಪೂಜೆ
ಬಸ್ ನಿಲ್ದಾಣ ಕಾಮಗಾರಿಗೆ ಗುದ್ದಲಿ ಪೂಜೆ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 19 :
ತಾಲೂಕಿನ ಕೌಜಲಗಿ ಗ್ರಾಮ(ಕಳ್ಳಿಗುದ್ದಿ ಕ್ರಾಸ್)ದಲ್ಲಿ ನೂತನವಾಗಿ ನಿರ್ಮಿಸಲು ಉದ್ಧೇಶಿಸಿರುವ ಬಸ್ ನಿಲ್ದಾಣ ಕಾಮಗಾರಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಕೌಜಲಗಿಯ ಹೊಸ ಬಸ್ ನಿಲ್ದಾಣ ಕಾಮಗಾರಿಗೆ 86 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಶಾಸಕರು ಕೌಜಲಗಿ ಸೇರಿದಂತೆ ಕ್ಷೇತ್ರದ ಇಡೀ ಹಳ್ಳಿಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿರುವುದು ಸುವರ್ಣಾಕ್ಷರಗಳಿಂದ ಬರೆದಿಡಬೇಕು. ಇವರಿಂದಲೇ ಅರಭಾವಿ ಮಾದರಿ ಕ್ಷೇತ್ರವಾಗಿದೆ ಎಂದು ಹೇಳಿದರು.
ಪ್ರಭಾಶುಗರ ನಿರ್ದೇಶಕ ಎಂ.ಆರ್. ಭೋವಿ, ಗ್ರಾಪಂ ಅಧ್ಯಕ್ಷ ನೀಲಪ್ಪ ಕೇವಟಿ, ರವಿ ಪರುಶೆಟ್ಟಿ, ಹುಬ್ಬಳ್ಳಿ ವಾ.ಕ.ರ.ಸಾ.ಸಂಸ್ಥೆಯ ಸಲಹಾ ಸಮೀತಿ ನಿರ್ದೇಶಕ ಅಕ್ಬರ ಮುಲ್ತಾನಿ, ತಾಪಂ ಸದಸ್ಯ ಶಾಂತಪ್ಪ ಹಿರೇಮೇತ್ರಿ, ಸುಭಾಸ ಕೌಜಲಗಿ, ನಿಂಗಪ್ಪ ಕುರಬೇಟ, ಗ್ರಾಪಂ ಮಾಜಿ ಅಧ್ಯಕ್ಷರಾದ ಅಶೋಕ ಉದ್ದಪ್ಪನವರ, ರಾಯಪ್ಪ ಬಳೋಲದಾರ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಮಹೇಶ ಪಟ್ಟಣಶೆಟ್ಟಿ, ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವು ಲೋಕನ್ನವರ, ಜಕೀರ ಜಮಾದಾರ, ಈರಪ್ಪ ಹುದ್ದಾರ, ಅವ್ವಣ್ಣಾ ಮೋಡಿ, ಮಹಾದೇವ ಬುದ್ನಿ, ಗ್ರಾಪಂ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.