RNI NO. KARKAN/2006/27779|Tuesday, March 17, 2026
You are here: Home » breaking news » ಗೋಕಾಕ:ವಾಯುಸೇನೆಗೆ ಸೆಲ್ಯುಟ್ ಹೊಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ವಾಯುಸೇನೆಗೆ ಸೆಲ್ಯುಟ್ ಹೊಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ 

ವಾಯುಸೇನೆಗೆ ಸೆಲ್ಯುಟ್ ಹೊಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

 

ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಪೆ 26 :

 
ಮಂಗಳವಾರ ನಸುಕಿನ ಜಾವ ಪಾಕಿಸ್ತಾನದಲ್ಲಿರುವ ಉಗ್ರರ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿರುವುದನ್ನು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಸ್ವಾಗತಿಸಿ ಸೇನಾ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಫೆ.14 ರಂದು ನಡೆದ ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ನಮ್ಮ ಭಾರತೀಯ ಸೇನೆಯು ಮುಯ್ಯಿಗೆ ಮುಯ್ಯಿ ತೀರಿಸಿಕೊಂಡಿದ್ದು ಸುಮಾರು 300ಕ್ಕೂ ಅಧಿಕ ಉಗ್ರರು ಸೇನೆಯ ದಾಳಿಗೆ ಮೃತರಾಗಿದ್ದಾರೆ. ವಿಶ್ವದಲ್ಲಿಯೇ ಭಾರತೀಯ ಸೈನಿಕರು ಬಲಶಾಲಿಗಳಾಗಿದ್ದು, ಎಂತಹ ಸಂದರ್ಭದಲ್ಲೂ ವಿರೋಧಿಗಳ ಹುಟ್ಟಡಗಿಸುತ್ತಾರೆ ಎಂಬುದಕ್ಕೆ ಇಂದಿನ ಬೆಳಗಿನ ಜಾವದ ಸೇನೆಯ ದಾಳಿಯೇ ಸ್ಪಷ್ಠ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ದೇಶದಲ್ಲಿರುವ ಪ್ರತಿಯೊಬ್ಬರೂ ನಮ್ಮ ಸೈನಿಕರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಎಲ್ಲರೂ ಒಂದಾಗಿ ದೇಶದ ಒಳತಿಗಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆನ್ನೆಲಬಾಗಿ ನಿಲ್ಲಬೇಕು. ತಮ್ಮ ಪ್ರಾಣದ ಹಂಗು ತೊರೆದು ಉಗ್ರರೊಂದಿಗೆ ನಿರಂತರವಾಗಿ ಸೆಣಸುತ್ತಿರುವ ನಮ್ಮ ದೇಶದ ಯೋಧರನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

Related posts: