RNI NO. KARKAN/2006/27779|Tuesday, August 11, 2026
You are here: Home » breaking news » ಗೋಕಾಕ:ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಒತ್ತಾಯ

ಗೋಕಾಕ:ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಒತ್ತಾಯ 

ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಒತ್ತಾಯ

 

ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಪೆ 28 :

 
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿದ್ದ ಆರ್ಥಿಕ ಮತ್ತು ಸಾಮಾಜಿಕ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, 2 ವರ್ಷಗಳ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಈ ಸಮೀಕ್ಷಾ ವರದಿಯು ಇದುವರೆಗೂ ಬಿಡುಗಡೆಯಾಗಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾತಿಗಳ ಸಮೀಕ್ಷೆ ನಡೆಸುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿದ್ದರು. ಕಾಂತರಾಜು ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಜಾತಿ ಸಮೀಕ್ಷೆಯನ್ನು ನಡೆಸಿ ವರದಿಯೊಂದನ್ನು ನೀಡುವಂತೆ ಆಗಿನ ಮುಖ್ಯಮಂತ್ರಿಗಳು ಸೂಚಿಸಿದ್ದರೆಂದು ಹೇಳಿದ್ದಾರೆ.
1931 ರ ನಂತರ ರಾಜ್ಯದಲ್ಲಿ ಜಾತಿಗಳ ಸಮೀಕ್ಷೆ ನಡೆದಿರುವುದು ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ. ಈ ಸಮೀಕ್ಷೆಯಿಂದ ರಾಜ್ಯದಲ್ಲಿರುವ ಯಾವ್ಯಾವ ಜಾತಿಗಳ ಸ್ಥಿತಿಗತಿ ಅರಿಯಲು ಸಮೀಕ್ಷಾ ಕಾರ್ಯ ನೆರವಾಗಲಿದೆ. ಅಲ್ಲದೇ ಆಯಾ ಜಾತಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಆದ್ದರಿಂದ ಕೂಡಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜಾತಿಗಳ ಸಮೀಕ್ಷೆಯನ್ನು ಬಿಡುಗಡೆ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣಕ್ಕಿ ಆಗ್ರಹಿಸಿದ್ದಾರೆ.

Related posts: