RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಜಿಲ್ಲಾ ಹಾಲು ಒಕ್ಕೂಟದ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಿ : ಆರ್.ಬಿ. ಜಂಬಗಿ ಪಾಟೀಲ

ಗೋಕಾಕ:ಜಿಲ್ಲಾ ಹಾಲು ಒಕ್ಕೂಟದ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಿ : ಆರ್.ಬಿ. ಜಂಬಗಿ ಪಾಟೀಲ 

ಜಿಲ್ಲಾ ಹಾಲು ಒಕ್ಕೂಟದ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಿ : ಆರ್.ಬಿ. ಜಂಬಗಿ ಪಾಟೀಲ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 5 :

 
ಜಿಲ್ಲಾ ಹಾಲು ಒಕ್ಕೂಟದಿಂದ ರೈತರ ಆರ್ಥಿಕಾಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಆರ್.ಬಿ. ಜಂಬಗಿ ಪಾಟೀಲ ಹೇಳಿದರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮಂಗಳವಾರದಂದು ಜಿಲ್ಲಾ ಹಾಲು ಒಕ್ಕೂಟದಿಂದ ರೈತ ಕಲ್ಯಾಣ ಸಂಘದ ಸದಸ್ಯರುಗಳಿಗೆ ಪರಿಹಾರ ಧನದ ಚೆಕ್ ವಿತರಿಸಿ ಅವರು ಮಾತನಾಡಿದರು.
ಒಕ್ಕೂಟದಿಂದ ರೈತಾಪಿ ವರ್ಗಕ್ಕೆ ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಯಂತ್ರ, ಹಾಲು ಕರೆಯುವ ಯಂತ್ರ ಮುಂತಾದ ಯೋಜನೆಗಳು ಸೇರಿದ್ದು, ಅಂತಹ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ರೈತ ಕಲ್ಯಾಣ ಸಂಘದ ಸದಸ್ಯರುಗಳ ಮಕ್ಕಳ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಧನ ಹಾಗೂ ಮರಣ ಹೊಂದಿದ ಸಂಘದ ಸದಸ್ಯರ ವಾರಸುದಾರರಿಗೆ ತಲಾ 10 ಸಾವಿರ ರೂ.ಗಳ ಪರಿಹಾರ ಧನದ ಚೆಕ್‍ಗಳನ್ನು ವಿತರಿಸಲಾಯಿತು.
ಮೂಡಲಗಿ ಪುರಸಭೆ ಮಾಜಿ ಅಧ್ಯಕ್ಷ ವೀರಣ್ಣಾ ಹೊಸೂರ, ಮಲ್ಲಪ್ಪ ಪಾಟೀಲ, ಎನ್‍ಎಸ್‍ಎಫ್ ಅತಿಥಿ ಗೃಹದ ದಾಸಪ್ಪ ನಾಯಿಕ, ಲಕ್ಕಪ್ಪ ಲೋಕುರಿ, ಅರಭಾವಿ ಪಪಂ ಸದಸ್ಯ ಕುಮಾರ ಪೂಜೇರಿ, ಬಸಪ್ಪ ಕಪರಟ್ಟಿ, ಇಸ್ಮಾಯಿಲ್ ಲಾಡಖಾನ್, ಬೆಳಗಾವಿ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಎನ್.ಟಿ. ಹಡಪದ, ಗೋಕಾಕ ಉಪಕೇಂದ್ರ ಅಧಿಕಾರಿ ಎಸ್.ಬಿ. ಕರಬನ್ನವರ, ಬಿ.ಎಂ. ಖಿಲಾರಿ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts: