ಗೋಕಾಕ:ಮಾತೆ ಮಹಾದೇವಿ ಲಿಂಗೈಕ್ಯೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ
ಮಾತೆ ಮಹಾದೇವಿ ಲಿಂಗೈಕ್ಯೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 14:
ಬಸವಧರ್ಮ ಹೋರಾಟಗಾರ್ತಿ, ಲಿಂಗಾಯತ ಪ್ರತ್ಯೇಕ ಧರ್ಮದ ಮುಂಚೂಣಿಯಲ್ಲಿದ್ದ ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾತೆ ಮಹಾದೇವಿ ಅವರ ನಿಧನದಿಂದ ನಾಡು ಬಡವಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ್ದರು. ದಕ್ಷಿಣ ಭಾರತದ ಮೊದಲ ಮಹಿಳಾ ಜಗದ್ಗುರು ಎಂಬ ಖ್ಯಾತಿಗೆ ಮಾತೆ ಮಹಾದೇವಿ ಪಾತ್ರರಾಗಿದ್ದರು. ಯುವ ಜನಾಂಗದಲ್ಲಿ ಬಸವತತ್ವ ಸಾರುವ ಹಾಗೂ ಶರಣ ಸಂಸ್ಕøತಿ ಮೂಡಿಸುವ ಸಲುವಾಗಿ ಲಿಂಗಾನಂದ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಬಸವದಳ ಸಂಘಟನೆ ಆರಂಭಿಸಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಕ್ಕಾಗಿ ಅಪಾರವಾಗಿ ಶ್ರಮಿಸಿದ್ದರು. ಮಾತೆ ಮಹಾದೇವಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.