RNI NO. KARKAN/2006/27779|Tuesday, March 24, 2026
You are here: Home » breaking news » ಬೆಳಗಾವಿ:ಚಿಕ್ಕೋಡಿ ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಅನ್ನೋದು ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ:ಚಿಕ್ಕೋಡಿ ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಅನ್ನೋದು ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ 

ಚಿಕ್ಕೋಡಿ ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಅನ್ನೋದು ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ

ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಏ 1 :

ಬಿಜೆಪಿಯಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕತ್ತಿ ಬ್ರದರ್ಸ್ಸ್ ಅಸಮಾಧಾನಗೊಂಡಿರುವ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ,ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಎನ್ನುವ ವದಂತಿಗಳು ಹರಿದಾಡುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರು ವಿಚಲಿತರಾಗುವ ಅವಶ್ಯಕತೆ ಇಲ್ಲ ಎರಡೂ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಮುಗಿದಿದೆ ಅಭ್ಯರ್ಥಿಗಳ ಬದಲಾವಣೆ ಮಾಡುವದಿಲ್ಲ ಎಂದು ಅರಣ್ಯ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಕತ್ತಿ ಸಹೋದರರು ಯಾವುದೇ ಕಾಂಗ್ರೆಸ್ ನಾಯಕರನ್ನ ಸಂಪರ್ಕ ಮಾಡಿಲ್ಲ ಕಾಂಗ್ರೆಸ್ ಸೇರುವುದು ಕೇವಲ ವದಂತಿ ಮಾತ್ರ.

ಚಿಕ್ಕೋಡಿ, ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿ ಆಗಿದೆ.ಇದರಲ್ಲಿ ಯಾವುದೇ ಬದಲಾವಣೆ ಇಲ್ಲಾ ಎಂದು ಸತೀಶ್ ಜಾರಕಿಹೊಳಿ ಹೇಳಿದರು

ಕತ್ತಿ ಸಹೋದರರು ಪಕ್ಷ ಸೇರುವ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

Related posts: