RNI NO. KARKAN/2006/27779|Monday, February 16, 2026
You are here: Home » breaking news » ಗೋಕಾಕ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ : ಪ್ರಕಾಶ ಹೊಳೆಪ್ಪಗೋಳ

ಗೋಕಾಕ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ : ಪ್ರಕಾಶ ಹೊಳೆಪ್ಪಗೋಳ 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ : ಪ್ರಕಾಶ ಹೊಳೆಪ್ಪಗೋಳ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಏ 11 :

 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.
ಗುರುವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕಾಡಳಿತ, ತಾಲೂಕಾ ಪಂಚಾಯತ, ಶಿಕ್ಷಣ ಇಲಾಖೆ ಹಾಗೂ ನಗರಸಭೆ ಗೋಕಾಕ ಇವರು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮತದಾನದ ಕುರಿತು ಜಾಗೃತಿಗಾಗಿ ಬೈಕ್‍ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು ಮತದಾನವು ಪವಿತ್ರ ಕಾರ್ಯವಾಗಿದ್ದು, ಪ್ರತಿಯೊಬ್ಬರು ಮತದಾನದಿಂದ ದೂರ ಉಳಿಯದೇ ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಿ ದೇಶ ಕಟ್ಟುವ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮೂಲಕ ಸಂಚರಿಸಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪೌರಾಯುಕ್ತ ಎಮ್.ಎಚ್.ಅತ್ತಾರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಮ್.ಎಲ್.ಜನ್ಮಟ್ಟಿ, ಬಿಸಿಯೂಟ ಯೋಜನಾಧಿಕಾರಿ ಎ.ಬಿ.ಮಾಲಭನ್ನವರ, ಕಂದಾಯ ಅಧಿಕಾರಿ ಶಿವುಕುಮಾರ ಹಳ್ಳೂರ, ಜಿ.ಆರ್.ಮಾಳಗಿ, ವಿ.ಎಮ್.ಸೂಲೆಗಾಂವಿ ಸೇರಿದಂತೆ ಅನೇಕರು ಇದ್ದರು.

Related posts: