RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ: ನಾಳೆ ಸಂಜೆ ಕಾಂಗ್ರೆಸ ಕಾರ್ಯಕರ್ತರ ಸಭೆ : ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾಹಿತಿ

ಗೋಕಾಕ: ನಾಳೆ ಸಂಜೆ ಕಾಂಗ್ರೆಸ ಕಾರ್ಯಕರ್ತರ ಸಭೆ : ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾಹಿತಿ 

ನಾಳೆ ಸಂಜೆ ಕಾಂಗ್ರೆಸ ಕಾರ್ಯಕರ್ತರ ಸಭೆ : ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾಹಿತಿ

 

ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಎ.11-

 

ಬರುವ ಎಪ್ರಿಲ್ 23 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವ್ಹಿ.ಎಸ್.ಸಾಧುನವರ ಅವರ ಪ್ರಚಾರ ಸಂಬಂಧವಾಗಿ ಕಾಂಗ್ರೆಸ ಕಾರ್ಯಕರ್ತರ ಸಭೆಯನ್ನು ನಾಳೆ ದಿ. 12ರಂದು ಸಂಜೆ 6 ಗಂಟೆಗೆ ನಗರದ ಸಮುದಾಯ ಭವನದಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ ಮುಖಂಡ ವಿವೇಕ ಜತ್ತಿ ತಿಳಿಸಿದ್ದಾರೆ.
ಸಭೆಯಲ್ಲಿ ಚುನಾವಣೆ ಸಂಬಂಧವಾಗಿ ಮತಗಟ್ಟೆ ಮಟ್ಟದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಚರ್ಚಿಸಲಾಗುವದು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ ಹಾಗೂ ಯುವ ಮುಖಂಡ ಲಖನ್ ಜಾರಕಿಹೊಳಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಡಾ. ವಿ.ಎಸ್. ಸಾಧುನವರ ಉಪಸ್ಥಿತ ಇರಲಿದ್ದಾರೆಂದು ತಿಳಿಸಿದ ವಿವೇಕ ಜತ್ತಿ ಅವರು ಕ್ಷೇತ್ರದ ಎಲ್ಲ ಕಾಂಗ್ರೆಸ ಕಾರ್ಯಕರ್ತರು ಸಭೆಗೆ ಆಗಮಿಸಬೇಕೆಂದು ಕೇಳಿಕೊಂಡಿದ್ದಾರೆ.

Related posts: