RNI NO. KARKAN/2006/27779|Tuesday, January 27, 2026
You are here: Home » breaking news » ಯಮಕನಮರಡಿ:ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯದವರು ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತೆ : ಸಚಿವ ಸತೀಶ

ಯಮಕನಮರಡಿ:ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯದವರು ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತೆ : ಸಚಿವ ಸತೀಶ 

ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯದವರು ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತೆ : ಸಚಿವ ಸತೀಶ

 

ನಮ್ಮ ಬೆಳಗಾವಿ ಸುದ್ದಿ ,ಯಮಕನಮರಡಿ ಏ 16 :

 
ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯದವರು ಸಂಕಷ್ಟ ಪಡುವ ಪರಿಸ್ಥಿತಿ ಎದುರಾಗುತ್ತದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು

ಮಂಗಳವಾರದಂದು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಮೋದಿ ಅವರ ಸಾಧನೆ ಶೂನ್ಯವಾಗಿದೆ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ .ರಸ್ತೆ , ನೀರು ವಿದ್ಯುತ್ ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಒದಗಿಸಲು ಕಾಂಗ್ರೆಸ ಪಕ್ಷಕ್ಕೆ ಮತ ಹಾಕಬೇಕಾಗಿದೆ ಅಂದಾಗ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ . ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡಿ ಮೋದಿ ಅವರು ಜನ ಸಾಮಾನ್ಯರಿಗೆ ಮೋಸ ಮಾಡಿದ್ದಾರೆ ಈ ಸಾರಿ ಮೋದಿ ಅವರನ್ನು ಸೋಲಿಸಲು ಇಡೀ ದೇಶ ಒಂದಾಗಿದೆ ಆ ದೀಸೆಯಲ್ಲಿ ಎಲ್ಲರೂ ಶ್ರಮಿಸಿ ಪ್ರಕಾಶ ಹುಕ್ಕೇರಿ ಅವರಿಗೆ ಬಹುಮತದಿಂದ ಆರಿಸಿ ತರಬೇಕೆಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ದಡ್ಡಿ ಜಿ.ಪಂ ವ್ಯಾಪ್ತಿಯ ಎಲ್ಲಾ ಮುಖಂಡರು ಉಪಸ್ಥಿತರಿದ್ದರು

Related posts: