RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ದಿ. 30 ರಂದು ಸಚಿವ ಸತೀಶ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಗೋಕಾಕ:ದಿ. 30 ರಂದು ಸಚಿವ ಸತೀಶ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ 

ದಿ. 30 ರಂದು ಸಚಿವ ಸತೀಶ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 28 :

 

ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ದಿ. 30 ರಂದು ಮಧ್ಯಾನ್ಹ 1.30 ಗಂಟೆಗೆ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯು ಅರಣ್ಯ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಸಚಿವರ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಶಾಸಕರು, ಜಿಲ್ಲಾ ಪಂಚಾಯತ ಸದಸ್ಯರು, ತಾಲೂಕಾ ಪಂಚಾಯತ ಸದಸ್ಯರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಹಾಗೂ ಎಪಿಎಮ್‍ಸಿ ಸದಸ್ಯರನ್ನು ಆಹ್ವಾನಿಸಲಾಗಿದ್ದು ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯೊಂದಿಗೆ ಸರಿಯಾದ ಸಮಯಕ್ಕೆ ಸಭೆಗೆ ಹಾಜರಾಗಬೇಕೆಂದು ತಹಶೀಲದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts: