ಗೋಕಾಕ:ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಸಾ. ಶಿ. ಇಲಾಖೆ ಆದೇಶಿಸಿದೆ : ಜಿ.ಬಿ.ಬಳಗಾರ
ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಸಾ. ಶಿ. ಇಲಾಖೆ ಆದೇಶಿಸಿದೆ : ಜಿ.ಬಿ.ಬಳಗಾರ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ.28-
ಪಾಲಕರ ಮನದಾಸೆಯಂತೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಹೇಳಿದ್ದಾರೆ.
ಅವರು ಪತ್ರಿಕಾ ಪ್ರಕಟನೆ ನೀಡಿರುವ ಅವರು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಗೋಕಾಕ ವಲಯದಲ್ಲಿ ನಾಲ್ಕು ಆಂಗ್ಲ ಮಾಧ್ಯಮ ಶಾಲೆಗಳು ಮಂಜೂರಾಗಿದ್ದು ಅವು ಪ್ರಾರಂಭಗೊಳ್ಳುತ್ತಿರುವದು ಸಂತಸದ ವಿಷಯ.
ವಲಯದ ಗೋಕಾಕ ನಗರದಲ್ಲಿ (ಸರಕಾರಿ ಹೆಣ್ಣುಮಕ್ಕಳ ಶಾಲೆ ನಂ.2), ಖನಗಾಂವ (ಕರ್ನಾಟಕ ಪಬ್ಲಿಕ್ ಶಾಲೆ), ಬೆಣಚಿನಮರಡಿ (ಕೊ) (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ) ಹಾಗೂ ಮಲ್ಲಾಪೂರ ಪಿ.ಜಿ. (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ) ಆಂಗ್ಲ ಮಾಧ್ಯಮ ವಿಭಾಗಗಳನ್ನು ಈ ವರ್ಷ ಪ್ರಾರಂಭಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ವiಕ್ಕಳನ್ನು ದಾಖಲಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಇಲಾಖೆಯ ಲಾಭ ಪಡೆದುಕೊಳ್ಳಲು ಮುಂದಾಗಬೇಕು
ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಇಗಾಗಲೇ 15 ದಿನಗಳ ತರಬೇತಿ ನೀಡಲಾಗಿದೆ. ಸರಕಾರದಿಂದ ಉಚಿತ ಪುಸ್ತಕ ಒಳಗೊಂಡಂತೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವದು ಎಂದು ಹೇಳಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕುರಿತು ಈಗಾಗಲೇ ಪಾಲಕರ ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಅನುಕೂಲಕರ ವಾತಾವರಣ ನಿರ್ಮಾಣಕ್ಕಾಗಿ ಮಕ್ಕಳ ಸ್ನೇಹಿ ಕಲಿಕಾ ಕೊಠಡಿ, ಪೀಠೋಪಕರಣ ಹಾಗೂ ಪಾಠೋಪಕರಣ ತಯಾರಿಸಿಕೊಳ್ಳಲು ಮುಖ್ಯೋಪಾಧ್ಯಾಯರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಬಳಗಾರ ತಿಳಿಸಿದ್ದಾರೆ